ಬೆಂಗಳೂರು: ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ “ಬ್ರ್ಯಾಟ್”.(BRAT) ಮೂಡಿ ಬರುತ್ತಿದೆ.
5 ವರ್ಷಗಳ ನಂತರ ಮತ್ತೆ ನಿರ್ಮಾಣಕ್ಕೆ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ನಿರ್ಮಾಪಕ ಮಂಜುನಾಥ್ ಕಂದಕೂರ್ ಮುಂದಾಗಿದ್ದಾರೆ. ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ “ಬ್ರ್ಯಾಟ್” ಎಂದು ಹೆಸರಿಡಲಾಗಿದೆ. ಗುರುನಂದನ್ ಅಭಿನಯದ ಯಶಸ್ವಿ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕರ ಸಹೋದರ ಬದರಿನಾಥ್ ಶೀರ್ಷಿಕೆ ಅನಾವರಣ ಮಾಡಿದರು.
ನಾನು ಹಾಗೂ ನಿರ್ದೇಶಕ ಶಶಾಂಕ್ ಅವರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಈ ಚಿತ್ರ ಮಾಡುತ್ತಿದ್ದೇವೆ. ಆದರೆ ಶಶಾಂಕ್ ಅವರು ಈವರೆಗೂ ನಿರ್ದೇಶನ ಮಾಡಿರದ ಹಾಗೂ ನಾನು ಕೂಡ ಈವರೆಗೂ ಮಾಡಿರದ ವಿಭಿನ್ನ ಕಥೆಯುಳ್ಳ ಚಿತ್ರ “ಬ್ರ್ಯಾಟ್”. ಮನಿಶಾ ಅವರು ಕನ್ನಡದವರೆ ಆಗಿದರೂ ಮೊದಲ ಬಾರಿಗೆ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಯಾವುದೇ ಕೊರತೆ ಇಲ್ಲದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದಾರೆ. ಅದ್ಭುತ ಕಲಾವಿದರ ಹಾಗೂ ಅನುಭವಿ ತಂತ್ರಜ್ಞರ ದಂಡೇ ನಮ್ಮ ಚಿತ್ರದಲ್ಲಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.
“ಬ್ರ್ಯಾಟ್” ಇದು ಅಪ್ಪ – ಮಗನ ಸಂಘರ್ಷ. ಅಪ್ಪನಿಗೆ ಮಗನೇ “ಬ್ರ್ಯಾಟ್”. ಅಪ್ಪನ ಪಾತ್ರದಲ್ಲಿ ಅಚ್ಯುತ ಕುಮಾರ್ ಅಭಿನಯಿಸುತ್ತಿದ್ದಾರೆ. ಮನೀಶ ನಾಯಕಿ. ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ. “ಫಸ್ಟ್ ರ‍್ಯಾಂಕ್ ರಾಜು” ಚಿತ್ರಕ್ಕೆ ನೀವೆಲ್ಲರೂ ನೀಡಿದ ಪ್ರೋತ್ಸಾಹ ಅಪಾರ. ಶಶಾಂಕ್ ಅವರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ಐದು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್. ನಾಯಕಿ ಮನಿಶಾ ಕಂದಕೂರ್, ಶ್ರೀವತ್ಸ, ತೇಜಸ್, ಗೌರವ್ ಶೆಟ್ಟಿ ಸಂಚಿತ್, ಛಾಯಾಗ್ರಾಹಕ ಅಭಿಲಾಷ್ ಇದ್ದರು.