ಬೆಂಗಳೂರು: ಆನ್ ಲೈನ್ ಆಪ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಮಹಾರಾಣಿ ವಿವಿಯ ಹಾಸ್ಟೆಲ್ ನಲ್ಲಿ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಆನ್ ಲೈನ್ ಆಪ್ ನಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾಗಿದ್ದಳು. ಹೀಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಪಾವನಾ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈ ವಿದ್ಯಾರ್ಥಿನಿ ಪ್ರಥಮ ವರ್ಷದ ಬಿಎಸ್ಸಿ ಓದುತ್ತಿದ್ದಳು. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ರೂಮ್ ನಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಆನ್ ಲೈನ್ ಆಪ್ ನಲ್ಲಿ 15 ಸಾವಿರ ರೂ. ಹಣ ಹೂಡಿಕೆ ಮಾಡಿರುವುದಾಗಿ ಉಲ್ಲೇಖವಾಗಿದೆ.
ಹಣ ಹೂಡಿಕೆ ಮಾಡುವುದಕ್ಕಾಗಿ ವಿದ್ಯಾರ್ಥಿನಿ ಸ್ನೇಹಿತರ ಬಳಿ ಸಾಲ ಮಾಡಿದ್ದಳು. ಮರಳಿ ಕೊಡುವುದಕ್ಕಾಗಿ 10 ಸಾವಿರ ರೂ. ಹೊಂದಿಸಿದ್ದಳು. ಉಳಿದ 5 ಸಾವಿರ ರೂ. ಹೊಂದಿಸಲು ಆಗದೆ ಚಿಂತೆಗೆ ಒಳಗಾಗಿದ್ದಳು. ಕೊನೆಗೆ ಸಾಲ ತೀರಸಲು ಆಗದೆ ಆತಂಕದಿಂದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.