ಬೀದರ್ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲೇ ಧಗಧಗನೆ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಶಾಮತಾಬಾದ್ ಗ್ರಾಮದ ಬಳಿ ನಡೆದಿದೆ.
ಮದರಗಿ ಗ್ರಾಮದ ಸಚ್ಚಿದಾನಂದ ಎಂಬುವವರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದುಬಂದಿದೆ. ಸ್ವತಃ ಸಚ್ಚಿದಾನಂದ ಅವರು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಅವರು ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿ, ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಮನ್ನಾಏಖೇಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ನೀವು ಹೂಡಿಕೆ ಮಾಡಿದ ಹಣ ಈಗ ಸುರಕ್ಷಿತ.. ಈ ಹೊಸ ಅಪ್ಡೇಟ್ ತಿಳಿದರೆ ಹೂಡಿಕೆ ಇನ್ನೂ ಸುಲಭ!



















