ರಾಯಚೂರು : ಜಿಲ್ಲೆಯ ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ರಸ್ತೆಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಮೃತ ದುರ್ದೈವಿ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೃಷ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ ; ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!



















