ಮಂಗಳೂರು: ಕಂದಕಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ (Dakshin Kannada) ಜಿಲ್ಲೆ ಪುತ್ತೂರು (Puttur) ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ.
ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಸಾವನ್ನಪ್ಪಿರುವ ದುರ್ದೈವಿಗಳು. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂದು ತಿಳಿದು ಬಂದಿದೆ.
ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ತೆರಳುತ್ತಿತ್ತು. ಇಂದು ಬೆಳಗಿನ ಜಾವ 4:15ರ ಸುಮಾರಿಗೆ ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.