ನವದೆಹಲಿ: ಸಂಸದೆ ಸ್ವಾತಿ ಮಲಿವಾಲ್ (Swati Maliwal) ಮೇಲೆ ಆಪ್ತ ಸಹಾಯಕ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮೌನ ಮುರಿದಿದ್ದಾರೆ.
ಈ ಕುರಿತು ನ್ಯಾಯಯುತ ತನಿಖೆ ಆಗಬೇಕು. ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರುಗಳಿವೆ. ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ (Bibhav Kumar) ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೇ 13 ರಂದು ಸ್ವಾತಿ ಮಲಿವಾಲ್ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರತಿಯಾಗಿ ಸ್ವಾತಿ ಮಲಿವಾಲ್ ವಿರುದ್ಧ ಬಿಭವ್ ಕೂಡ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.