ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಆರೋಪ ಕಳಿ ಬಂದಿತ್ತು. ಸದ್ಯ ಎಫ್ಎಸ್ಎಲ್ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂಬುವುದು ದೃಢವಾಗಿದೆ.
ಫೋನ್ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್ ನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಸದ್ಯ ಈ ಕುರಿತು ವರದಿ ಬಂದಿದ್ದು, ಆಡಿಯೋದಲ್ಲಿರುವುದು ಮುನಿರತ್ನ ಅವರ ಧ್ವನಿ ಎಂಬುವುದು ದೃಢವಾಗಿದೆ.
ಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿದ್ದರು. ನಂತರ ಅತ್ಯಾಚಾರ ಪ್ರಕರಣದಲ್ಲೂ ಸಹ ಮತ್ತೆ ಜೈಲು ಸೇರಿದ್ದರು. ಈಗ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದರೆ, ಈಗ ಬಂದಿರುವ ವರದಿಯಿಂದಾಗಿ ಮುನಿರತ್ನಗೆ ಸಂಕಷ್ಟ ಶುರುವಾದಂತಾಗಿದೆ.