ದಾವಣಗೆರೆ: ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಸೆ.19ರಂದು ದಾವಣಗೆರೆಯ ಅರಳಿಮರ ಸರ್ಕಲ್ ಹತ್ತಿರ ಗಣೇಶ ಮೂರ್ತಿ ಮೆರವಣಿಗೆ ನಡೆದಿತ್ತು. ಈ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಹಿಂದೂ-ಮುಸ್ಲಿಂ ಸೇರಿದಂತೆ 48 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.
ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೆ ಜಾಮೀನು ಸಿಕ್ಕಿದ್ದು, ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಸತೀಶ್ ಪೂಜಾರಿ ಅವರನ್ನು ಹಿಂದೂ ಯುವಕರು ಜೈಕಾರದೊಂದಿಗೆ ಸ್ವಾಗತಿಸಿದ್ದಾರೆ.
ಸೆ.19ರಂದು ನಗರದ ಅರಳಿ ಮರ ಸರ್ಕಲ್ ನಲ್ಲಿ ಮೆರವಣಿಗೆ ಸಾಗಿದ ನಂತರ ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು (Police) ಗಾಯಗೊಂಡಿದ್ದರು. ಕೂಡಲೇ ಮುಸ್ಲಿಂ ಮುಖಂಡರು ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ್ದರು. ಮೆರವಣಿಗೆ ಸಾಗಿದ ಮೂರು ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 48 ಜನರನ್ನು ಬಂಧಿಸಿದ್ದರು.