ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್ ಬಿದ್ದ ಪರಿಣಾಮ 5ನೇ ತರಗತಿಯ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವಂರನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಬಿಬಿಎಂಪಿ ಮೈದಾನದ ಗೇಟ್ ಬಿದ್ದ ಪರಿಣಾಮ ಮಗು ಸಾವನ್ನಪ್ಪಿದೆ. ನಿರಂಜನ್ ಸಾವನ್ನಪ್ಪಿದ ಬಾಲಕ ಎನ್ನಲಾಗಿದೆ.
ವಿಜಯಕುಮಾರ್ ಮತ್ತು ಪ್ರಿಯಾ ಎಂಬ ದಂಪತಿಯ ಮಗುವಾದ ನಿರಂಜನ್, ಆಟ ಆಡುವುದಕ್ಕಾಗಿ ಮೈದಾನದ ಗೇಟ್ ಓಪನ್ ಮಾಡಿದ್ದಾನೆ. ಆದರೆ, ಗೇಟ್ ಮಗುವಿನ ಮೇಲೆಯೇ ಬಿದ್ದಿದೆ. ಈ ಸಂದರ್ಭದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಸಾವನ್ನಪ್ಪಿರುವ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್ ನಲ್ಲಿ ವಾಸಿಸುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.