ಬೀದರ್ : ರಭಸವಾಗಿ ಬಂದ ಪೊಲೀಸ್ ಕಾನ್ಸ್ಟೇಬಲ್ ಕಾರು ರಸ್ತೆಬದಿ ಕಸ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಭಾಲ್ಕಿ ನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಜ್ಞಾನಾಬಾಯಿ (55) ಗಾಯಗೊಂಡ ಮಹಿಳೆ. ಮೆಹಕರ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆ ಉಮಾಕಾಂತ್ ಅವರ ಕಾರು ಮಹಿಳೆಯ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
ಇಂದು ಭಾಲ್ಕಿಯ ಚಿನ್ನದ ಅಂಗಡಿ ಮುಂದೆ ಜ್ಞಾನಾಬಾಯಿ ರಸ್ತೆ ಗುಡಿಸುತ್ತಿದ್ದರು. ಅಷ್ಟರಲ್ಲಿ ವೇಗವಾಗಿ ಬಂದ ಪೊಲೀಸ್ ಪೇದೆಯ ಕಾರು ಆ ಮಹಿಳೆಯ ಮೇಲಿಂದಲೇ ಹತ್ತಿಕೊಂಡು ಹೋಗಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸದ್ಯ ಜ್ಞಾನಾಬಾಯಿ ಅವರನ್ನು ಚಿಕಿತ್ಸೆಗಾಗಿ ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಘಟನಾ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರ‍್ಯಾಪಿಡೋ ಬೈಕ್‌ನಲ್ಲಿ ಯುವತಿಯ ಹುಚ್ಚಾಟ



















