ಬೀದರ್: ರಾಜ್ಯದಲ್ಲಿ ಮತ್ತೋರ್ವ ಗುತ್ತಿಗೆದಾರ (Contractor) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಾರಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮುಗಿ ಬೀಳುವಂತಾಗಿದೆ.
ಈ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕಂಟಕ ಎದುರಾಗಿದೆ. ಸಚಿವರ ಆಪ್ತ ರಾಜು ಕಪನೂರು (Rajkumar H Kapnoor) ವಿರುದ್ಧ ಆರೋಪ ಮಾಡಿ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೀಗಾಗಿ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿದೆ.
ಗುತ್ತಿಗೆದಾರ ಬೀದರ್‌ನಲ್ಲಿ (Bidar) ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಕಾರಣ ಎಂದು ಡೆತ್ ನೋಟ್ ನಲ್ಲಿ (Death Note) ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಪ್ರಕರಣದಲ್ಲಿ ಕರ್ತವ್ಯಲೋಪ ತೋರಿದ ಆರೋಪದಲ್ಲಿ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಈಗಾಗಲೇ ಎಸ್ಪಿ ಪ್ರದೀಪ್ ಗುಂಟಿ ಅಮಾನತು ಮಾಡಿದ್ದಾರೆ.
ರಾಜು ಕಪನೂರ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನೂ ಆಗಿದ್ದ ರಾಜು ಕಪನೂರ್, ಹಿಂದೆ ಅಕ್ರಮ ಪಿಸ್ತೂಲ್ ಹೊಂದಿರುವ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು..