ರಸ್ತೆಯಲ್ಲಿ ಮಲಗಿದ್ದ ಶ್ವಾನದ ಮೇಲೆ ಕಾರು ಹತ್ತಿಸಿರುವ ಅಮಾನವೀಯ ಘಟನೆ ನಡೆದಿದೆ.
ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜುಲೈ 13 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಾಲಕನ ಕೃತ್ಯ ಸಿಸಿ ಕ್ಯಾಮೆದಲ್ಲಿ ಸೆರೆಯಾಗಿದ್ದು, ಘಟನೆ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಗಂಭೀರ ಸ್ಥಿತಿಯಲ್ಲಿರುವ ಶ್ವಾನಕ್ಕೆ ಶ್ವಾನ ಪ್ರಿಯರಿಂದ ಚಿಕಿತ್ಸೆ ನಿಡಲಾಗುತ್ತಿದೆ. ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ವಾನ ಪ್ರಿಯರು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.



















