ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪಟ್ಟದ ರಾಣಿ ದೇವಸ್ಥಾನದಲ್ಲಿ ದೇವರ ಹುಂಡಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.
ದೇವಾಲಯಕ್ಕೆ ಬಂದ ಕಳ್ಳ ಮೊದಲು ದೇವರಿಗೆ ಕೈಮುಗಿದು, ಹಣೆಗೆ ಕುಂಕುಮ ಹಚ್ಚಿಕೊಂಡು ಪ್ರಾರ್ಥನೆ ಮಾಡಿದ ಬಳಿಕ ಕಳ್ಳತನಕ್ಕೆ ಮುಂದಾಗಿದ್ದು ಅಚ್ಚರಿ ಮೂಡಿಸಿದೆ.
ಪ್ರಾರ್ಥನೆ ಮಾಡಿದ ಕೆಲವೇ ಕ್ಷಣಗಳಲ್ಲಿ ದೇವಾಲಯದಲ್ಲಿದ್ದ ಹುಂಡಿಯನ್ನು ಕದ್ದೊಯ್ದು ಪರಾರಿಯಾಗಿದ್ದಾನೆ. ಕಳ್ಳತನದ ದೃಶ್ಯ ದೇವಸ್ಥಾನದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಕರಣ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹಾವೇರಿಯ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ!



















