ಮಂಡ್ಯ: ಜೈಲಲ್ಲಿದ್ದ ಮಗನನ್ನು ಭೇಟಿ ಮಾಡಲು ಹೋಗಿ ತಂದೆಯೂ ಲಾಕ್ ಆಗಿರುವ ಘಟನೆ ನಡೆದಿದೆ.
ಬಟ್ಟೆ ಕೊಡಲು ಹೋಗಿ ಅಪ್ಪ ಅರೆಸ್ಟ್ ಆಗಿದ್ದಾರೆ. ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಹಲಗೂರು ಗ್ರಾಮದ ಶಿವಣ್ಣ ಎಂಬುವವರೇ ಮಗನನ್ನು ನೋಡಲು ಹೋಗಿ ಈಗ ಜೈಲು ಪಾಲಾಗಿದ್ದಾರೆ.
ಶಿವಣ್ಣ ಅವರ ಪುತ್ರ ಮಧುಸೂದನ್ ಜೈಲು ಸೇರಿದ್ದ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ ಅವರಿಗೆ ಕರೆ ಮಾಡಿ “ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇರುವ ಬ್ಯಾಗ್ ನೀಡುತ್ತಾರೆ. ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.
ಮಗನ ಮಾತಿನಂತೆ ಶಿವಣ್ಣ ಅವರು ಮಳ್ಳವಳ್ಳಿಯಲ್ಲಿ ಅಪರಿಚಿತನಿಂದ ಬಟ್ಟೆ ಇದ್ದ ಬ್ಯಾಗ್ ಪಡೆದು, ಮಂಡ್ಯದ ಕಾರಾಗೃಹಕ್ಕೆ ಬಂದಿದ್ದಾರೆ. ಈ ವೇಳೆ ಬ್ಯಾಗ್ ಪರಿಶೀಲನೆ ನಡೆಸಿದಾಗ 20 ಗ್ರಾಂ ಗಾಂಜಾ ಪತ್ತೆಯಾಗಿದೆ.
ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ