ಶಿವಮೊಗ್ಗ: ಕ್ರಿಕೆಟ್ ವಿಚಾರದಲ್ಲಿ ಸ್ನೇಹಿತರ ಮಧ್ಯೆಯೇ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಿಲ್ಲೆಯ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಅರುಣ್ (23) ಸಾವನ್ನಪ್ಪಿರುವ ಯುವಕ. ಸೋಮವಾರ ಸಂಜೆ ನಡೆದ ಕ್ರಿಕೆಟ್ ವಿಚಾರವನ್ನು ರಾತ್ರಿ ಮದ್ಯ ಸೇವಿಸಿ ಚರ್ಚೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಆಗ ಅರುಣ್ ಕೊಲೆಯಾಗಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸಿದ್ದಾರೆ.