ಬೆಂಗಳೂರು: ಬಿಎಂಟಿಸಿ (BMTC) ಬಸ್ ನ ಚಾಲಕ ಹಾಗೂ ನಿರ್ವಾಹಕ ಬಸ್ಸಿನಲ್ಲೇ ಪ್ರಯಾಣಿಕರ ಎದುರು ಜಗಳ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಫ್ಲೈಓವರ್ (Hebbal Flyover) ಬಳಿ ನಡೆದಿದೆ.
ಬಸ್ ಹೊರಡುತ್ತಿದ್ದ ಸಂದರ್ಭದಲ್ಲೇ ಚಾಲಕ ಹಾಗೂ ನಿರ್ವಾಹಕ ಜಗಳ ಮಾಡಿಕೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಪ್ರಯಾಣಿಕರು ಮಧ್ಯೆ ಪ್ರವೇಶಿಸಿ, ಶಾಂತಗೊಳಿಸಲು ಯತ್ನಿಸಿದ್ದಾರೆ. ಆದರೆ, ಇಬ್ಬರೂ ಯಾವುದಕ್ಕೂ ಜಗ್ಗಿಲ್ಲ. ಹೀಗಾಗಿ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ.
ಇಬ್ಬರ ಜಗಳವನ್ನು ಪ್ರಯಾಣಿಕರು ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ(social media) ವೈರಲ್ ಆಗುತ್ತಿದೆ. ಇದನ್ನು ಕಂಡು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇಬ್ಬರ ಮಧ್ಯೆ ಯಾವ ಕಾರಣಕ್ಕೆ ಜಗಳ ನಡೆಯಿತು ಎಂಬುವುದು ಮಾತ್ರ ಬಹಿರಂಗವಾಗಿಲ್ಲ.