ದಾವಣಗೆರೆ : ಮನೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.
ಜಗಳೂರು ತಾಲ್ಲೂಕಿನ ದೇವಿಕೆರೆ ಎಂಬಲ್ಲಿ ಈ ಘಟನೆ ನಡೆದಿದೆ. ಪ್ರತಿಮಾ ಮತ್ತು ಮಲ್ಲಿಕಾರ್ಜುನ್ ಹಲ್ಲೆಗೊಳಗಾಗಿದ್ದಾರೆ. ವೀರೇಶ್, ಗುರುಸಿದ್ದಪ್ಪ ಹಾಗೂ ಶರಣಪ್ಪ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಮನೆ ಕಟ್ಟುವುದಕ್ಕೆ ನಿರ್ಧರಿಸಿದ್ದ ಪ್ರತಿಭಾ ಹಾಗೂ ಮಲ್ಲಿಕಾರ್ಜುನ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಜಾಗ ನಮ್ಮದು ಎಂದು ಹೇಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪಿಡಿಒ ಸಮ್ಮುಖದಲ್ಲಿ ಅಳತೆ ಮಾಡಲು ಹೋದಾಗ ಎರಡು ಕುಟುಂಬದ ನಡುವೆ ವಾಗ್ವಾದ ನಡೆದಿತ್ತು. ವಾಗ್ವಾದ ತಾರಕಕ್ಕೇರಿ ಪ್ರತಿಭಾ ಮತ್ತು ಮಲ್ಲಿಕಾರ್ಜುನ್ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರರಕಣ ಬಿಳಚೋಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

















