ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.
ಜಿಲ್ಲೆಯ ಕೊಲ್ಹಾರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಕಚೇರಿ ಮುಂದೆಯೇ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ. ಸ್ಥಳೀಯ ಸ್ಟೋನ್ ಕ್ರಷರ್ ಮಾಲೀಕರಾಗಿರುವ ಗೀರಗಾಂವಕರ್ ಹಾಗೂ ಹೊನ್ಯಾಳ್ ಕುಟುಂಬಗಳು ಪರಸ್ಪರ ಬಡಿದಾಡಿಕೊಂಡಿವೆ. ಕಲ್ಲು ತೂರಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.