ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ವಿಚಾರಕ್ಕಾಗಿ ಬೀದಿಯಲ್ಲಿ ಹೊಡೆದಾಡಿಕೊಂಡ ಘಟನೆಯೊಂದು ನಡೆದಿದೆ.
ನಾಯಿ ಗಲೀಜು ಮಾಡುತ್ತಿದೆ ಅಂತ ಎರಡು ಕುಟುಂಬಸ್ಥರ ಮಧ್ಯೆ ಗಲಾಟೆ ನಡೆದಿದೆ. ಈ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಬಡಿದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿವೆ. ಬನಶಂಕರಿ ಠಾಣಾ ವ್ಯಾಪ್ತಿಯ ಕದಿರೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಇಂದುಮತಿ ಎಂಬ ಯುವತಿ ತಮ್ಮ ಸಾಕು ನಾಯಿಯನ್ನು ವಾಕಿಂಗ್ ಗೆ ಕರೆದೊಯ್ದಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಯಾಕೆ ನಿಮ್ಮ ನಾಯಿ ನಮ್ಮ ಮನೆಮುಂದೆ ಗಲೀಜು ಮಾಡಿದೆ ಎಂದು ಪ್ರಶ್ನಿಸಿದ್ದಾರೆ. ಆ ವೇಳೆ ಮಾತಿಗೆ ಮಾತು ಬೆಳೆದು ಎರಡೂ ಕುಟುಂಬಸ್ಥರ ಮಧ್ಯೆ ಗಲಾಟೆ ನಡೆದಿದೆ. ನಡು ರಸ್ತೆಯಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿವೆ.



















