ಬೆಂಗಳೂರು: ಪ್ಯಾಸೆಜ್ ನಲ್ಲಿ ಕುಳಿತುಕೊಳ್ಳುವುದಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ಯಶವಂತಪುರ-ಬೀದರ್ ಟ್ರೈನ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ವ್ಯಕ್ತಿಯ ಗುರುತು ಇದುವರೆಗೂ ಪತ್ತೆಯಾಗಿಲ್ಲ.
ಯಲಹಂಕ-ಗೌರಿ ಬಿದನೂರು ರೇಂಜ್ ನಲ್ಲಿ ರೈಲು ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ರೈಲಿನಲ್ಲಿ ಜಗಳ ನಡೆದ ವೇಳೆ ವ್ಯಕ್ತಿಯನ್ನು ರೈಲಿನಿಂದ ತಳ್ಳಿದ್ದಾರೆ. ಈ ಘಟನೆ ಫೆ. 10ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೂಡಲೇ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಕೂಡ ಪ್ರಯಾಣಿಕರು ಮನವಿ ಮಾಡಿದ್ದರು.
ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.