ಕೊಡಗು: ಕುಡಿದ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಕೊಳತ್ತೋಡು ಬೈಗೋಡು ಗ್ರಾಮದಲ್ಲಿ ಈ ಕೊಲೆಯಾಗಿರುವ (Murder Case) ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತೆರಳಿದ್ದು, ವಿಶ್ವ ಎನ್ನುವ ವ್ಯಕ್ತಿಯನ್ನು ಮೊಗೇರ ಗಣೇಶ ಎಂಬ ವ್ಯಕ್ತಿ ಕೊಲೆ ಮಾಡಿದ್ದಾನೆ.
ಇವರಿಬ್ಬರು ಗ್ರಾಮದ ಅಚ್ಚಯ್ಯ ಎಂಬುವವರ ಕಾಫಿತೋಟದ ಲೈನ್ ನಲ್ಲಿ ವಾಸವಿದ್ದ ಕಾರ್ಮಿಕರು ಎನ್ನಲಾಗಿದೆ. ಈ ಘಟನೆ ವಿರಾಜಪೇಟೆ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಿಸಿದ್ದಾರೆ.
ಗಲಾಟೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಕುಡಿದ ಮತ್ತಿನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.