ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥವಾಗಿದೆ.
ಜಿಲ್ಲೆಯ ಸೇಡಂ ತಾಲೂಕಿನ ಸಂಗಾವಿ(ಟಿ) ಗ್ರಾಮದ ರಾಣಿ ಎಂಬ ವಿದ್ಯಾರ್ಥಿನಿ ಬಿಎ ಪರೀಕ್ಷೆ ಬರೆಯುವುದಕ್ಕಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುತಿದ್ದ ನದಿಯಲ್ಲಿ ತಂದೆಯ ಕೈ ಹಿಡಿದುಕೊಂಡು ಸಾಗಿದ್ದಾರೆ. ಪರೀಕ್ಷೆ ಬರೆಯಲು ಸೇಡಂ ಪಟ್ಟಣಕ್ಕೆ ಹೋಗುವಾಗ ವಿದ್ಯಾರ್ಥಿನಿಯ ತಂದೆ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಮಗಳ ಕೈಹಿಡಿದು ಕಾಗಿಣಾ ನದಿ ದಾಟಿಸಲು ಹರಸಾಹಸಪಟ್ಟಿದ್ದಾರೆ. ವಿದ್ಯಾರ್ಥಿನಿಯ ಈ ಧೈರ್ಯ ಕಂಡು ಈಗ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.



















