ದಾವಣಗೆರೆ: ಭಾರತಾಂಬೆಯ ಸೇವೆ ಸಲ್ಲಿಸಿ ಹುಟ್ಟೂರಿಗೆ ಆಗಮಿಸಿದ ಹೆಮ್ಮೆಯ ಸೈನಿಕನನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
23 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇನೆಯಿಂದ ನಿವೃತ್ತಿ ಹೊಂದಿದ ಸೈನಿಕನನ್ನು ರೈಲು ನಿಲ್ದಾಣದಿಂದಲೇ ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಗ್ರಾಮಸ್ಥರು ಹಾಗೂ ಕುಟುಂಬಸ್ಥರು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಿದ್ದಾರೆ.
ಆರತಿ ಬೆಳಗಿ, ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಗ್ರಾಮಕ್ಕೆ ಸ್ವಾಗತಿಸಲಾಗಿದೆ. BSF ನಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ಯೋಧ ಬಸವರಾಜ್ ಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಬಸವರಾಜ್ ಜಿಲ್ಲೆಯ ಬಲ್ಲೂರು ಗ್ರಾಮದವರು.
23 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ ಈಗ ತಾಯ್ನಾಡಿಗೆ ಮರಳಿದ್ದಾರೆ. ಬಸವರಾಜ್ ಅವರು ಪಂಜಾಬ್, ರಾಜಸ್ಥಾನ್, ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಗ್ರಾಮಸ್ಥರು ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿ, ನಿವೃತ್ತಿ ಬದುಕು ಸುಂದರವಾಗಿರಲಿ ಎಂದು ಹಾರೈಸಿದ್ದಾರೆ. ಅಲ್ಲದೇ, ಗ್ರಾಮದ ಯುವಕರಿಗೆ ಸೈನ್ಯ ಸೇರುವ ಕುರಿತು ಬಸವರಾಜ್ ಸ್ಪೂರ್ತಿಯ ಮಾತುಗಳನ್ನಾಡಿದ್ದಾರೆ.