ನಟ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ 38 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ತನ್ನ ಹುಟ್ಟು ಹಬ್ಬದ ದಿನ ಮೋಸ್ಟ್ ಎಕ್ಸ್ಪೆಕ್ಟೆಡ್ ಚೀತಾ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಎರಡು ದಿನ ಮೊದಲೇ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕಳೆದ ಎರಡ್ಮೂರು ವರ್ಷದಿಂದ ಹೀಗೆ ಮಾಡುತ್ತಿದ್ದಾರೆ. ದಯಮಾಡಿ ಕ್ಷಮಿಸಿ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬ ನನಗೆ ಮತ್ತೊಂದಿಲ್ಲ. ಆದ ಕಾರಣ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ನಿಮ್ಮ ಪ್ರಜ್ವಲ್‌ಗೆ ಆಶೀರ್ವದಿಸಬೇಕೆಂದು ಕೋರಿಕೊಳ್ಳುತ್ತೇನೆ ಅಂತ ಪ್ರಜ್ವಲ್ ದೇವರಾಜ್ ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಒಟ್ಟಾರೆ, ಕನ್ನಡದ ಹೀರೋಗಳು ತಮ್ಮ ಜನ್ಮ ದಿನವನ್ನ ಬಹಿರಂಗವಾಗಿ ಆಚರಿಸಿಕೊಳ್ಳುವುದನ್ನ ವರ್ಷ ವರ್ಷಕ್ಕೂ ಕಡಿಮೆ ಮಾಡುತ್ತಿದ್ದಾರೆ.


















