ರಾಯಚೂರು: ಪ್ರೇಯಸಿ ಕೈಕೊಟ್ಟು ಬೇರೆಯೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ (Raichur) ಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26)ಆತ್ಮಹತ್ಯೆಗೆ ಶರಣಾದ ಯುವಕ. ಇನ್ ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಮೃತ ವರುಣ್ ಪ್ರೀತಿಸುತ್ತಿದ್ದ. ಆದರೆ, ಆ ಯುವತಿ ಈತನಿಗೆ ಕೈಕೊಟ್ಟು ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದು ವರುಣ್ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಯುವತಿ ರಾಯಚೂರಿನಲ್ಲಿ ನರ್ಸಿಂಗ್ ಓದುತ್ತಿದ್ದಳು. ಆದರೆ, ವರುಣ್ ಹಾಗೂ ಯುವತಿಯ ಮಧ್ಯೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ ನಂತರ ಭೇಟಿಯಾಗಿದ್ದಾರೆ. ಕಳೆದ 5 ವರ್ಷಗಳಿಂದ ಇಬ್ಬರೂ ಪ್ರೀತಿಸಿದ್ದಾರೆ. ಆದರೆ, ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದಕ್ಕೆ ವರುಣ್ ತೀವ್ರ ಬೇಸರಗೊಂಡಿದ್ದ. ಹೀಗಾಗಿ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾನೆ.