ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತಡರಾತ್ರಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಕೃಷ್ಣಾ ನದಿಯನ್ನು ಬಿಟ್ಟು ಕೃಷಿ ಜಮೀನಿಗೆ ನುಗ್ಗಿದ ಮೊಸಳೆಯನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮಾಹಿತಿ ತಿಳಿದ ಅಥಣಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಗ್ರಾಮಸ್ಥರ ಸಹಕಾರದಿಂದ ನಸುಕಿನ ಜಾವ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಮೊಸಳೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಬಳಿಕ ಸೆರೆ ಹಿಡಿದ ಬೃಹತ್ ಮೊಸಳೆಯನ್ನು ಸುರಕ್ಷಿತವಾಗಿ ಹಿಡಕಲ್ ಜಲಾಶಯದ ಹಿನ್ನೀರಿಗೆ ಸ್ಥಳಾಂತರ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ : ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಲ್ಲಿ ಸಾವಿರ ಹುದ್ದೆಗಳ ನೇಮಕಾತಿ!


















