ಮೈಸೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಈಗಾಗಲೇ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಇದೀಗ ನಿನ್ನೆ ಸುರಿದ ಗಾಳಿ ಮಳೆಗೆ ಕಾರಿನ ಮೇಲೆ ಬೃಹತ್ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ. ಮೈಸೂರಿನ ದಿವಾನ್ಸ್ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿ ಯಾರು ಇಲ್ಲದಿದ್ದಕ್ಕೆ ಬಾರಿ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ದುರಸ್ಥಿ ಕಾರ್ಯ ಮುಂದುವರೆಸಿದ್ದಾರೆ..