ಬೆಂಗಳೂರು: ಮುಸ್ಲಿಂರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಚಂದ್ರಶೇಖರ ಸ್ವಾಮೀಜಿಗೆ ಕಾನೂನಿನ ಮೂಲಕವೇ ಉತ್ತರ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುತ್ತಿದೆ. ಮುಸ್ಲಿಂ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದರೆ, ಯಾರೇ ದೂರು ಕೊಟ್ಟರೂ ಎಫ್ ಐಆರ್ ಹಾಕಲಾಗುತ್ತದೆ . ಎಲ್ಲರಿಗೂ ಕಾನೂನು ಒಂದೇ. ಸ್ವಾಮೀಜಿ ಬಗ್ಗೆ ನನಗೂ ಗೊತ್ತಿದೆ ಅವರ ಬಗ್ಗೆ ನಮಗೆ ಗೌರವ ಇದೆ. ಆದರೆ, ಕೆಲವು ಅತಿರೇಕದ ಮಾತುಗಳು ಸಮಾಜದ ಸ್ವಾಸ್ಥ್ಯಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.
ಸ್ವಾಮೀಜಿ ಅವರ ವಿರುದ್ಧ ಯಾರೋ ದೂರು ನೀಡಿದ್ದಾರೆ. ಅದರ ಮೇಲೆ ಎಫ್ ಐಆರ್ ಆಗಿದೆ. ಅವರು ಕ್ಷಮಾಪಣೆ ಕೇಳಿದ್ದಾರೆ. ಮುಂದಿನ ಕಾನೂನು ಪ್ರಕಾರ ಏನು ಕ್ರಮ ಆಗುತ್ತೆ ಅದು ಪೊಲೀಸರೇ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.