ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಹೊರವಲಯದ ನೂಲ್ವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ಸರಕು ಸುಟ್ಟು ಭಸ್ಮವಾಗಿದೆ. ಬಟ್ಟೆಗಳನ್ನು ತುಂಬಿಕೊಂಡು ಲಾರಿಯೊಂದು ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಲಾರಿಗೆ ಹತ್ತಿದ ಬೆಂಕಿಯ ಕಿನ್ನಾಲೆಗೆ ಸಂಪೂರ್ಣ ಸುಟ್ಟು ಹೋಗಿದೆ. ಈ ವೇಳೆ ಕೆಲಕಾಲ ಸಂಚಾರ ಅಸ್ತವ್ಯಸ್ಥ ಉಂಟಾಗಿತ್ತು. ತಕ್ಷಣವೇ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಂತರ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.