ಮೈಸೂರು : ನಿಯಂತ್ರಣ ತಪ್ಪಿದ ಲಾರಿ ಗದ್ದೆಗೆ ನುಗ್ಗಿ ಪಲ್ಟಿಯಾಗಿರುವ ಘಟನೆ ಮೈಸೂರಿನ ಮಂಡಕಳ್ಳಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರದಿಂದ ಕೇರಳ ಕಡೆ ಸಾಗುತ್ತಿದ್ದ ಲಾರಿ, ಅತಿಯಾದ ವೇಗದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆ ಪ್ರದೇಶಕ್ಕೆ ಉರುಳಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಸುರಕ್ಷಿತವಾಗಿ ಚಾಲಕನನ್ನು ರಕ್ಷಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಈ ಘಟನಾ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ಟೇಕ್-ಆಫ್ ವೇಳೆ ಸ್ವಿಸ್ ಏರ್ ವಿಮಾನದ ಇಂಜಿನ್‌ನಲ್ಲಿ ಬೆಂಕಿ : ದೆಹಲಿಯಲ್ಲಿ ತಪ್ಪಿದ ಭಾರಿ ಅನಾಹುತ


















