ಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ. ಐಶ್ವರ್ಯಾ ಮಹೇಶ್ ಲೋಹಾರ(18) ಕೊಲೆಯಾದ ದುರ್ದೈವಿ. ಪ್ರಿಯಕರನನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಎಂದು ಗುರುತಿಸಲಾಗಿದೆ.
ಇಂದು ಈ ಜೋಡಿ ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದೆ. ನಂತರ ಪ್ರಶಾಂತ್, ಚಾಕುವಿನಿಂದ ಪ್ರೇಯಸಿ ಐಶ್ವರ್ಯಾಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಆನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಈ ಜೋಡಿ ಇಂದು ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿರುವ ಐಶ್ವರ್ಯಾಳ ಚಿಕ್ಕಮ್ಮನ ಮನೆ ಬಂದಿತ್ತು. ಆಗ ಏನಾಯ್ತೋ ಏನೋ ಇಬ್ಬರು ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಆದರೆ, ಪ್ರಶಾಂತ್ ಏಕಾಏಕಿ ಚಾಕುವಿನಿಂದ ಪ್ರೇಯಸಿ ಐಶ್ವರ್ಯಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ನಂತರ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡು ಪ್ರಾಣ ಬಿಟ್ಟಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ತನಿಖೆ ನಡೆಸುತ್ತಿದ್ದಾರೆ.