ಬೆಳಗಾವಿ: ಪಾಗಲ್ ಪ್ರೇಮಿಯೊಬ್ಬ ಪ್ರೀತಿಸುವಂತೆ ಬೆನ್ನು ಬಿದ್ದ ಪರಿಣಾಮ ಅಪ್ರಾಪ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಎಸ್ಸೆಸ್ಸೆಲ್ಸಿ(Student) ಓದುತ್ತಿದ್ದ ವಿದ್ಯಾರ್ಥಿನಿಆತ್ಮಹತ್ಯೆ(Suicide) ಗೆ ಶರಣಾಗಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ (Belgavi) ನಡೆದಿದೆ. ಸಿದ್ದಲಿಂಗ ಪೂಜೇರಿ ಎಂಬ ಯುವಕನಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಬೆಂಕಿ ಹಚ್ಚಿಕೊಂಡು ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಹಲವು ದಿನಗಳಿಂದಲೂ ಆರೋಪಿ ಪ್ರೀತ್ಸೆ ಅಂತಾ ಹಿಂದೆ ಬಿದ್ದಿದ್ದ ಎನ್ನಲಾಗಿದೆ. ಈ ಕುರಿತು ಆತನಿಗೆ ಹಲವು ಬಾರಿ ಎಚ್ಚರಿಕೆ ಕೂಡ ನೀಡಲಾಗಿತ್ತು. ಆದರೂ ಆತ ಪ್ರೀತ್ಸೆ ಅಂತಾ ಹಿಂದೆ ಬಿದ್ದಿದ್ದ ಎನ್ನಲಾಗಿದೆ. ಇದರಿಂದಾಗಿ ಮನನೊಂದ ಬಾಲಕಿ, ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಸಿದ್ದಲಿಂಗನನ್ನ ಬಂಧಿಸಿ ವಿಚಾರಣೆ ನಡೆಸಿ ಜೈಲಿಗೆ ಕಳುಹಿಸಿದ್ದಾರೆ.