ಬೆಂಗಳೂರು: ಪಾರ್ಕ್ ಮಾಡಿದ್ದ ಕಾರಿನಲ್ಲಿ ಕುಳಿತಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ (Brookefield Road) ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಫೆ. 20ರಂದು ಈ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ಗ್ರ‍್ಯಾಂಡ್ ಐಟೆನ್ ಕಾರಿನಲ್ಲಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮೃತದೇಹ ನೋಡಿದ ಅಪರಿಚಿತ ವ್ಯಕ್ತಿ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.