ಓಣಂ ಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಗಬಗಬನೇ ಇಡ್ಲಿ ತಿನ್ನಲು ಹೋಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಸೆ. 14ರಂದು ಈ ಘಟನೆ ನಡೆದಿದೆ. ಕೇರಳದ ವಳಯಾರ್ ನಲ್ಲಿ ಓಣಂ ಹಬ್ಬದ ಹಿನ್ನೆಲೆಯಲ್ಲಿ ಸ್ಥಳೀಯ ಸಂಘಟನೆಯೊಂದು ಇಡ್ಲಿ ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಗೆಲ್ಲುವುದಕ್ಕಾಗಿ ಗಬಗಬನೇ ಇಡ್ಲಿಯನ್ನು ತಿನ್ನಲು ಹೋಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಅರ್ಜೆಂಟ್ ನಲ್ಲಿ ತಿನ್ನುವಾಗ ಇಡ್ಲಿ ಗಂಟಲಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಇದರಿಂದ ಆ ವ್ಯಕ್ತಿ ಉಸಿರಾಡಲು ಪರದಾಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದುರಾದೃಷ್ಟವಶಾತ್ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಯನ್ನು ಪಾಲಕ್ಕಾಡ್ ನ ಅಲಮರಮ್ ನಿವಾಸಿ ಸುರೇಶ್ (49) ಎಂದು ಗುರುತಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.