ದಾವಣಗೆರೆ: ವ್ಯಕ್ತಿಯೋರ್ವ ಸಿಗ್ನಲ್ ಜಂಪ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ದಾವಣಗೆರೆಯ (Davanagere) ಡಿಸಿ ಆಫೀಸ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಮೈಕಲ್ ಕುಮಾರ್ (24) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಸಿಗ್ನಲ್ ಜಂಪ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಟಾಟಾ ಏಸ್‍ಗೆ ಡಿಕ್ಕಿ (Accident) ಹೊಡೆದಿದ್ದಾನೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಬೈಕ್ ನಲ್ಲಿದ್ದ ಹಿಂಬದಿಯ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.