ಉಡುಪಿ: ವ್ಯಕ್ತಿಯೋರ್ವ ಕಾರಿನಲ್ಲಿ ಮಲಗಿದ ವೇಳೆಯೇ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ್ದು, ಈ ಘಟನೆ ಉಡುಪಿ(Udupi)ಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ (37) ಸಾವನ್ನಪ್ಪಿದ ವ್ಯಕ್ತಿ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಆನಂದ ಬಂದಿದ್ದರು.
ರೋಗಿಯನ್ನು ಆಸ್ಪತ್ರೆಗ ಸೇರಿಸಿ, ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಮಲಗಿದ್ದರು. ಈ ವೇಳೆ ಕಾರಿನ ಗ್ಲಾಸ್ ನ್ನು ಮುಚ್ಚಿಕೊಂಡು ಎಸಿ ಹಾಕಿಕೊಂಡು ಮಲಗಿದ್ದಾರೆ. ಆದರೆ, ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಉಸಿರುಗಟ್ಟಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.