ಬೆಂಗಳೂರು: ಪತ್ನಿ ತವರು ಮನೆಗ ಹೋಗಿದ್ದಕ್ಕೆ ಸಂತಸಗೊಂಡ ಬೆಂಗಳೂರಿನ ಆಟೋ ಚಾಲಕನೊಬ್ಬ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೆ ಉಚಿತ ಬಿಸ್ಕತ್ ವಿತರಿಸಿದ್ದಾನೆ.
ಈ ಕುರಿತ ವಿಡಿಯೋವೊಂದು ವೈರಲ್ ಆಗುತ್ತಿದೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ “ಹೆಂಡತಿ ತನ್ನ ಹೆತ್ತವರ ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ” ಎಂದು ಬರೆದಿರುವ ಬರಹ ಕೂಡ ವೈರಲ್ ಆಗಿದೆ.
ನೆಟಿಜನ್ಗಳು ಇದನ್ನು ‘ಸ್ವಾತಂತ್ರ್ಯ’ ಎಂದು ಕರೆದಿದ್ದಾರೆ. ಆ ವ್ಯಕ್ತಿ ತಮ್ಮ ಆಟೋದಲ್ಲಿ ಪ್ರಯಾಣಿಸುವವರಿಗೆ ಬ್ರಿಟಾನಿಯಾ ಮಿಲ್ಕ್ ಬಿಕಿಸ್ಗಳನ್ನು ವಿತರಿಸಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಹಲವರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.