ಚಿತ್ರದುರ್ಗ: ಲೋಕಯುಕ್ತ ಬಲೆಗೆ ಬಿದ್ದು ಜೈಲು ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವನ್ನಪ್ಪಿದ್ದಾರೆ.
ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು ಎಂಬುವವರೇ ಸಾವನ್ನಪ್ಪಿದ್ದಾರೆ. ತಿಮ್ಮರಾಜು ಅವರಲ್ಲಿ ಎದೆ ನೋವು ಕಾಣಿಸಿಕೊಂಡಿದ್ದರಿಂದಾಗಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಕಚೇರಿಯಲ್ಲೆ ಲಂಚ ಪಡೆಯುತ್ತಿದ್ದ ವೇಳೆ ತಿಮ್ಮರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇ- ಸ್ವತ್ತು ಮಾಡಿಕೊಡಲು 25 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು ಎನ್ನಲಾಗಿದೆ.