ನವದೆಹಲಿ: ಯುವಕನೊಬ್ಬ ತನ್ನ ಸ್ನೇಹಿತನ ತಾಯಿಯ ಮೇಲೆಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಭೋಪಾಲ್ ನ ಅವಧಪುರಿಯಲ್ಲಿ ಈ ಘಟನೆ ನಡೆದಿದ್ದು, 43 ವರ್ಷದ ಮಹಿಳೆಯೊಬ್ಬಳ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ. ಅಲ್ಲದೇ, ಅತ್ಯಾಚಾರ ವಿರೋಧಿಸಿದ್ದಕ್ಕೆ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಕೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿಯ ಕೃತ್ಯದ ಕುರಿತು ಮಹಿಳೆ ಪೊಲೀಸರಿಗೆ ದೂರು ನೀಡಿ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮಹಿಳೆಯ ಮಗನ ಸ್ನೇಹಿತನಾಗಿರುವ ಆರೋಪಿಯು ಅತ್ಯಾಚಾರದ ಪ್ರಯತ್ನವನ್ನು ವಿರೋಧಿಸಿದರೆ ತನ್ನ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳಿಗೆ ಮಹಿಳೆ ಹೇಳಿದ್ದಾರೆ.
ಆರೋಪಿ ಮತ್ತು ಅತ್ಯಾಚಾರಕ್ಕೊಳಗಾದ ಮಹಿಳೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಆದರೆ, ಶುಕ್ರವಾರ ಸಂತ್ರಸ್ತೆಯ ಮಗ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ, ಆರೋಪಿಯು ಗೆಳೆಯನೊಂದಿಗೆ ಮನೆಗೆ ಬಂದು ಮನೆ ಬಾಗಿಲು ತಟ್ಟಿದ್ದಾನೆ. ಆಕೆಯ ಮಗ ಕಂಠಪೂರ್ತಿ ಕುಡಿದಿದ್ದರಿಂದ ಮೈಮೇಲೆ ಪ್ರಜ್ಞೆ ಇರಲಿಲ್ಲ. ಆಗ ಆತನ ತಾಯಿಯ ಮೇಲೆ ಆಕೆಯ ಮಗನ ಸ್ನೇಹಿತ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.