ಬೆಳಗಾವಿ : ಜಿಲ್ಲೆಯ ಗೋಕಾಕ್ ನಗರದ ಬೆಣಚಿನಮರಡಿ ಕ್ರಾಸ್ ಬಳಿ ಇರುವ ಚರಂಡಿಯಲ್ಲಿ ಅನುಮಾನಾಸ್ಪ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನೆ ಬೆಳಕಿಗೆ ಬಂದಿದ್ದು, ಮೃತ ವ್ಯಕ್ತಿ ಕಳೆದ ನಾಲ್ಕೈದು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಸುಮಾರು 30ರಿಂದ 40 ವರ್ಷದೊಳಗಿನ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ್ಯು ಅಪಘಾತದಿಂದ ಸಂಭವಿಸಿದ್ದೇ ಅಥವಾ ಯಾರಾದರೂ ಕೊಲೆ ಮಾಡಿ ಇಲ್ಲಿ ಎಸೆದಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ : “ಸಚಿನ್ ಕ್ರಿಕೆಟ್ ದೇವರು, ವೈಭವ್ ಸೂರ್ಯವಂಶಿ ದೇವತೆ” ; ಟೀಮ್ ಇಂಡಿಯಾ ಆಯ್ಕೆಗೆ ಶ್ರೀಕಾಂತ್ ಆಗ್ರಹ


















