ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿ (Medical Student)ಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಈತ ಸಿಲಿಕಾನ್ ಸಿಟಿಯಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದ. ಹಾಸ್ಟೇಲ್ ನಲ್ಲಿಯೇ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ವಿದ್ಯಾರ್ಥಿಯು ಸೋಮವಾರ ನಡೆದಿದ್ದ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಿದ್ದ. ಆದರೆ, ಮಧ್ಯಾಹ್ನ ಹಾಸ್ಟೆಲ್ ನಲ್ಲಿ ರೂಮ್ ಲಾಕ್ ಮಾಡಿಕೊಂಡು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
