ಮೈಸೂರು: ಪ್ರೇಮಿಗಳಿಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೈಸೂರಿನ ಮಂಡಕಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೋನಿಕಾ, ಜ್ಯೋತಿ ನಗರದ ಮನು ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಈ ಜೋಡಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇಬ್ಬರ ಮಧ್ಯೆ ಸಣ್ಣ ಮನಸ್ತಾಪವೊಂದು ಮೂಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯುವತಿಯು ಮೈಸೂರಿನ ಮಂಡಕಳ್ಳಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಯಸಿಯ ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ ಪ್ರಿಯಕರ ಮನು ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಜೋಡಿ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅದ್ಯಾವುದೋ ವಿಷಯಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಇದರಿಂದ ಬೇಸತ್ತು ಮೋನಿಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುತ್ತಿ ತಿಳಿಯುತ್ತಿದ್ದಂತೆ ಮನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.