ಕೋಲಾರ: ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಕೆಜಿಎಫ್ ತಾಲೂಕಿನ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಗಂಡ ಹಾಗೂ ಅವರ ಮನೆಯವರ ಕಿರುಕುಳದಿಂದ ಬೇಸತ್ತು ಮಹಿಳೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮಕ್ಕಳಾದ ಮೌನೀಶ್(7), ನಿತಿನ್(4)ರನ್ನು ಕೊಲೆ ಮಾಡಿ ತಾಯಿ ತಿಪ್ಪಮ್ಮ(30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತಿ ಮಣಿ ಕುಡಿದು ಬಂದು ಪ್ರತಿ ದಿನ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತು, ಮಹಿಳೆ ಈ ರೀತಿ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಬೆಮೆಲ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಮ್ಮ ಪತಿ ಮಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.