ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಕೇಂದ್ರ ಸಚಿವ ಸಂಪುಟವು ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಸಮಗ್ರ ಮಸೂದೆ ಜಾರಿಗೆ ತರುವ ಸಾಧ್ಯತೆ ಇದೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್, ಒಂದು ರಾಷ್ಟ್ರ, ಒಂದು ಚುನಾವಣೆ’ಯ ವಿಷಯವನ್ನು ಸಮರ್ಥಿಸಿಕೊಂಡು ಮಾತನಾಡಿದ್ದಾರೆ. ಅಲ್ಲದೇ, ಒಂದೇ ಬಾರಿ ಚುನಾವಣೆ ನಡೆಯುವುದರಿಂದ ಅಭಿವೃದ್ಧಿ ಸಾಧ್ಯ ಎಂದಿದ್ದಾರೆ.
ಬಿಜೆಪಿಯು ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ಐತಿಹಾಸಿಕ ಎಂದು ಬಣ್ಣಿಸಿದೆ. ಈ ಕ್ರಮವು ವೆಚ್ಚವನ್ನು ನಿಯಂತ್ರಿಸಲು ಪರಿಣಾಮಕಾರಿ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ.
ಸೆಪ್ಟೆಂಬರ್‌ನಲ್ಲಿ ದೇಶಾದ್ಯಂತ ಒಮ್ಮತ ಮೂಡಿಸುವ ಕಸರತ್ತಿನ ನಂತರ ಹಂತ ಹಂತವಾಗಿ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ.
ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ. ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇದ್ದಾರೆ.