ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಕೆ ಆರ್. ಮಾರುಕಟ್ಟೆಯ ಫ್ಲೈ ಓವರ್ ಮೇಲೆ ನಡೆದಿದೆ. ಈ ಘಟನೆ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆರ್ ಶಂಕರ್ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಶಂಕರ್ ಬೈಕ್ ನಲ್ಲಿ ಮಾರುಕಟ್ಟೆಯಿಂದ ಮೈಸೂರು ರಸ್ತೆ ಕಡೆಗೆ ತೆರಳುತ್ತಿದ್ದರು. ಬೈಕ್ ಸ್ಕಿಡ್ ಆಗಿದ್ದಾಗ ಅವರ ತಲೆಯ ಮೇಲೆ ಅಪರಿಚತ ವಾಹನ ಹರಿದು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಹೀಗಾಗಿ ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಚಾಮರಾಜಪೇಟೆ ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.