ತುಮಕೂರು: ವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ (Bike wheeling) ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ನಗರದ ಟೂಡಾ ಕಚೇರಿ ಹತ್ತಿರ ಈ ಘಟನೆ ನಡೆದಿದೆ. ಹೇಮಾದ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ವಿ.ಟಿ. ತಿಪ್ಪೇಸ್ವಾಮಿ ಸಾವನ್ನಪ್ಪಿರುವ ವ್ಯಕ್ತಿ. ಶನಿವಾರ ಬೆಳಗ್ಗೆ ಮನೆಗೆ ಹಾಲು ತರಲೆಂದು ಹೋಗಿದ್ದ ಸಂದರ್ಭದಲ್ಲಿ ವ್ಹೀಲಿಂಗ್ ಮಾಡಿಕೊಂಡು ಬಂದ ಪುಂಡರ ಬೈಕ್, ತಿಪ್ಪೇಸ್ವಾಮಿ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಪರಿಣಾಮ ತಿಪ್ಪೇಸ್ವಾಮಿ ಅವರ ತಲೆ ಮತ್ತು ಕಾಲಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ಅವರನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ತಿಪ್ಪೇಸ್ವಾಮಿ ಸಾವನ್ನಪ್ಪಿದ್ದಾರೆ. ಈ ಕುರಿತು ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.