ಬೆಂಗಳೂರು : ನಗರದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯರು ಮತ್ತು ಯುವತಿಯರ ಒಳ ಉಡುಪುಗಳನ್ನು ಕದ್ದು ವಿಲಕ್ಷಣವಾಗಿ ವರ್ತಿಸುತ್ತಿದ್ದ ‘ಸೈಕೋ’ ಕಳ್ಳನ್ನನು ಇದೀಗ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಮಲ್(23) ಬಂಧಿತ ಆರೋಪಿ.
ಕೇರಳ ಮೂಲದ 23 ವರ್ಷದ ಅಮಲ್, ಮನೆ ಮಹಡಿ, ಹಾಗೂ ಆಚೆ ಒಣಹಾಕಿರುವ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಹೊರಗಡೆ ಸುತ್ತಾಡಿ ಮನೆಗಳನ್ನು ದೂರದಿಂದಲೇ ಪರಿಶೀಲನೆ ಮಾಡಿ, ನಂತರ ಯಾರು ಇಲ್ಲದ ವೇಳೆ ನುಗ್ಗಿ ಒಳ ಉಡುಪುಗಳನ್ನು ಕದ್ದೊಯ್ಯುತ್ತಿದ್ದ. ಬಳಿಕ ಅವುಗಳನ್ನು ತಾನು ಧರಿಸಿಕೊಂಡು ಫೋಟೋ ತೆಗೆದುಕೊಂಡು ವಿಕೃತ ಆನಂದ ಪಡುತ್ತಿದ್ದ ಎನ್ನಲಾಗಿದೆ.
ಸದ್ಯ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ವಿಕೃತ ಕಾಮಿ ಅಮಲ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಈ ವೇಳೆಯೇ ಕದ್ದ ಒಳ ಉಡುಪುಗಳನ್ನು ಧರಿಸಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿರುವುದು ಮೊಬೈಲ್ನಲ್ಲಿ ಪತ್ತೆಯಾಗಿವೆ. ಹಾಗೇ ಅಮಲ್ ವಾಸವಿದ್ದ ಮನೆಯಲ್ಲಿಯೂ ಸಹ ಮಹಿಳೆಯರ ಒಳ ಉಡುಪುಗಳನ್ನ ಸಂಗ್ರಹಿಸಿ ಇಟ್ಟುಕೊಂಡಿರುವುದು ಕಂಡುಬಂದಿದೆ. ಸದ್ಯ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ರಾಯಚೂರಿನಲ್ಲಿ ಭೀಕರ ಅಪಘಾತ | ಐವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ!



















