ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಮುಂಬಯಿ ಪೊಲೀಸರು ಇಬ್ಬರು ಶಂಕಿತ ವ್ಯಕ್ತಿಗಳನ್ನು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ವೈರಲ್ ಆಗಿದೆ.
ಶಂಕಿತ ವ್ಯಕ್ತಿಯು ಸೈಫ್ ಕುಟುಂಬ ವಾಸವಿರುವ ಅಪಾರ್ಟ್ ಮೆಂಟ್ ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಸೆರೆಯಾಗಿದ್ದಾನೆ. ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಫೋಟೋವನ್ನು ಸ್ವತಃ ಪೊಲೀಸರೇ ಬಹಿರಂಗ ಮಾಡಿದ್ದಾರೆ ಎನ್ನಲಾಗಿದೆ. ಶಂಕಿತ ವ್ಯಕ್ತಿಯು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದಾನೆ. ಆತ ಯಾರು? ಆತನ ಉದ್ದೇಶ ಏನಾಗಿತ್ತು ಎಂಬ ಕುರಿತು ಈಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಘಟನೆ ಬಗ್ಗೆ ಅನೇಕ ಅನುಮಾನಗಳು ಮೂಡಿವೆ. ಸೈಫ್ ಕುಟುಂಬದವರು ವಾಸವಾಗಿರುವ ಅಪಾರ್ಟ್ಮೆಂಟ್ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲವೇ? ದರೋಡೆಗೆ ಯತ್ನಿಸಿದ ವ್ಯಕ್ತಿಗಳ ಹಿನ್ನೆಲೆ ಏನು ಎಂಬ ಪ್ರಶ್ನೆ ಕಾಡುತ್ತಿದೆ.