ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಇರಾನ್ ಕೂಡಾ ಪ್ರತೀಕಾರದ ದಾಳಿ ಮುಂದುವರಿಸಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿದೆ.
ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯ ಮೊದಲ ದಿನವೇ ಇರಾನ್‌ನಲ್ಲಿ 170ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಇರಾನ್‌ನ ಕ್ಷಿಪಣಿ ವ್ಯವಸ್ಥೆಗಳ ಮೇಲೆ ಭಾರೀ ಪ್ರಮಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, ದೇಶದ 131 ನಗರಗಳು ದಾಳಿಗೆ ಗುರಿಯಾಗಿವೆ. ಇರಾನ್‌ನ ಅಣ್ವಸ್ತ್ರ ನೆಲೆಯೂ ಬಾಂಬ್ ದಾಳಿಗೆ ತುತ್ತಾಗಿದೆ. ಎರಡೂ ಕಡೆ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಈ ಮಧ್ಯೆ ಇರಾನ್‌ನಲ್ಲೇ 700ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ HRANA ಮಾಹಿತಿ ನೀಡಿದೆ.
ಇದೀಗ ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಹಾಗೂ 700ಕ್ಕೂ ಅಧಿಕ ಮಂದಿಯ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಅಂತ್ಯಕ್ರಿಯೆಗಾಗಿ ಸ್ಮಶಾನದಲ್ಲಿ ಜೆಸಿಬಿಯಿಂದ ನೂರಾರು ಗುಂಡಿಗಳನ್ನು ತೆಗೆಯಲಾಗಿತ್ತು. ಅದರ ಡ್ರೋನ್ ದೃಶ್ಯದ ಫೋಟೊವನ್ನು ಇರಾನ್ ಹಂಚಿಕೊಂಡಿದೆ. ಗುಂಡಿ ಮುಂದೆ ಮೃತದೇಹ ಇಟ್ಟುಕೊಂಡು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಬಳಿಕ ಸಾಮೂಹಿಕ ಅಂತ್ಯಕ್ರಿಯೆ ನಡೆಸಿದ್ದಾರೆ.
ಇದನ್ನೂ ಓದಿ : ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್ಸ್ಕ್ರೈಬರ್ಸ್!



















