ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ಪೊಲೀಸ್ ಸಿಬ್ಬಂದಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಈ ಘಟನೆ ನಗರದ ಜಿಲ್ಲಾ ನ್ಯಾಯಾಲಯದ ಹತ್ತಿರ ಶನಿವಾರ ನಡೆದಿದೆ. ಬಸವರಾಜ ವಿಠ್ಠಲಾಪುರ ಸಾವನ್ನಪ್ಪಿದ ಸಿಬ್ಬಂದಿ ಎನ್ನಲಾಗಿದೆ.
ಹೃದಯಾಘಾತಕ್ಕೆ ಬಲಿಯಾಗಿರುವ ಬಸವರಾಜ ಅವರನ್ನು ಗದಗ ಸಶಸ್ತ್ರ ಮೀಸಲು ಪಡೆ ಪೊಲೀಸ್ ವಾಹನ ಚಾಲಕ ಎನ್ನಲಾಗಿದೆ. ಅವರು ಗದಗನಿಂದ ಧಾರವಾಡಕ್ಕೆ ಕೈದಿ ಬಿಡಲು ಬಂದಿದ್ದರು. ಈ ವೇಳೆ ವಾಹನ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವಾಹವನ್ನು ರಸ್ತೆ ಪಕ್ಕ ನಿಲ್ಲಿಸಿದ್ದಾರೆ. ವಾಹನ ನಿಲ್ಲಿಸುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ವಾಹನದಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.